ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ ಹಾಗೂ ಜಾಗೃತಿ ಕಾರ್ಯಕ್ರಮ!

Malnad-Cancer-Hospital
ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ ಹಾಗೂ ಜಾಗೃತಿ ಕಾರ್ಯಕ್ರಮ ದಿನಾಂಕ 6 ನೆ ಶುಕ್ರವಾರ ಡಿಸೆಂಬರ್ 2024 ರಂದು ಶ್ರೀ ಕಾಳಿಕಾಂಬ ದೇವಸ್ಥಾನ ಸಭಾಂಗಣ,ಶಿರಾಳಕೊಪ್ಪ ನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಶಿವಮೊಗ್ಗ, 6 ಡಿಸೆಂಬರ್ 2024: ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ,ಶಿವಮೊಗ್ಗ ಹಾಗೂ ಶ್ರೀ ಕಾಳಿಕಾಂಬ ವಿಶ್ವಕರ್ಮ ದೇವಸ್ಥಾನ ಸಮಿತಿ,ಶಿರಾಳಕೊಪ್ಪ ,ಭಾರತೀಯ ವೈದ್ಯಕೀಯ ಸಂಸ್ಥೆ,ಶಿಕಾರಿಪುರ ಇವರುಗಳ ಸಹಯೋಗದಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ ಹಾಗೂ ಜಾಗೃತಿ ಕಾರ್ಯಕ್ರಮ ದಿನಾಂಕ 6 ನೆ ಶುಕ್ರವಾರ ಡಿಸೆಂಬರ್ 2024 ರಂದು ಶ್ರೀ ಕಾಳಿಕಾಂಬ ದೇವಸ್ಥಾನ ಸಭಾಂಗಣ,ಶಿರಾಳಕೊಪ್ಪ ನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು.

Malnad-Cancer-Hospital

ಈ ಕಾರ್ಯಕ್ರಮದಲ್ಲಿ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆಯ ಕ್ಯಾನ್ಸರ್ ಶಸ್ತ್ರ ಚಿಕಿತ್ಸಾ ವೈದ್ಯರಾದ ಡಾ.ದೀಪಕ್ ಹಾಗೂ ಸಿಬ್ಬಂದಿ ವರ್ಗ ಮತ್ತು ಶಿಕಾರಿಪುರ ಭಾರತೀಯ ವೈದ್ಯಕೀಯ ಸಂಸ್ಥೆಯ ಅಧ್ಯಕ್ಷರಾದ ಡಾ.ಶ್ರೀನಿವಾಸ್ , ಡಾ.ಶಶಿಕಲಾ ,ಶ್ರೀ ಕಾಳಿಕಾಂಬ ವಿಶ್ವಕರ್ಮ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ನಾಗರಾಜ್ ಹಾಗೂ ಶಿರಾಳಕೊಪ್ಪ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಸಿಬ್ಬಂದಿ ವರ್ಗ ,ಆಶಾ ಕಾರ್ಯಕರ್ತರು ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಕ್ಯಾನ್ಸರ್ ರೋಗದ ಬಗ್ಗೆ ಅರಿವು ಮಾಹಿತಿಯನ್ನು ಸಾರ್ವಜನಿಕರಿಗೆ ನೀಡಲಾಯಿತು. ಸುಮಾರು 50 ಕ್ಕೂ ಹೆಚ್ಚು ರೋಗಿಗಳಿಗೆ ಸಮಾಲೋಚನೆ ಮತ್ತು ತಪಾಸಣೆಗಳನ್ನು ಯಶಸ್ವಿಯಾಗಿ ನಡೆಸಲಾಯಿತು.

Leave a Reply

Your email address will not be published. Required fields are marked *